ಅಭಿಪ್ರಾಯ / ಸಲಹೆಗಳು

ನಮ್ಮ ಬಗ್ಗೆ

ಇತಿಹಾಸ

ರಾಷ್ಟ್ರದಲ್ಲಿ ಜೈವಿಕ ಇಂಧನ ಅಭಿವೃದ್ಧಿ ಕ್ಷೇತ್ರದಲ್ಲಿ ಕಾರ್ಯ ಪ್ರವೃತ್ತವಾಗಿರುವ ಕೆಲವೇ ರಾಜ್ಯಗಳ ಪೈಕಿ ಕರ್ನಾಟಕ ರಾಜ್ಯ ಮುಂಚೂಣಿಯಲ್ಲಿದೆ. ಜೈವಿಕ ಇಂಧನವನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ದಿನಾಂಕ 12.09.2008 ರಂದು ರಾಷ್ಟ್ರದಲ್ಲಿಯೇ ಪ್ರಪ್ರಥಮವಾಗಿ “ಕರ್ನಾಟಕ ರಾಜ್ಯ ಜೈವಿಕ ಇಂಧನ ಕಾರ್ಯಪಡೆ” ರಚಿಸುವ ಮೂಲಕ ದಿನಾಂಕ 01.03.2009 ರಂದು ಕರ್ನಾಟಕ ಜೈವಿಕ ಇಂಧನ ನೀತಿ ಜಾರಿಗೊಳಿಸಿದೆ. ಜೈವಿಕ ಇಂಧನ ನೀತಿ ಅನುಷ್ಠಾನಗೊಳಿಸುವ ಹಾಗೂ ಈ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ರಚಿಸಿದ “ಕರ್ನಾಟಕ ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿ” ದಿನಾಂಕ 06.12.2010 ರಿಂದ ಕಾರ್ಯಪ್ರವೃತ್ತವಾಗಿದೆ.

 

ಉದ್ದೇಶಗಳು

 • ಜೈವಿಕ ಇಂಧನ ಅಭಿವೃದ್ಧಿ ಕಾರ್ಯಕ್ರಮಗಳನ್ನು ರೂಪಿಸುವುದು ಹಾಗೂ ಅನುಷ್ಠಾನಗೊಳಿಸುವುದು.
 • ವಿವಿಧ ಪ್ರದೇಶಗಳಿಗೆ ಯೋಗ್ಯವಾದ ಜೈವಿಕ ಇಂಧನ ಸಸ್ಯಗಳನ್ನು ಬೆಳೆಸಲು ಕೃಷಿಯೇತರ ಭೂಮಿಯನ್ನು ಗುರುತಿಸುವುದು.
 • ಜೈವಿಕ ಎಥನಾಲ್‌ ಉತ್ಪಾದನೆಗಾಗಿ ಕಬ್ಬು, ಬೀಟ್‌ರೂಟ್‌, ಗೋವಿನ ಜೋಳ ಮುಂತಾದ ಬೆಳೆಗಳ ಬೇಸಾಯವನ್ನು ಪ್ರೋತ್ಸಾಹಿಸುವುದು.
 • ಜೈವಿಕ ಇಂಧನ ಮತ್ತು ಇತರೆ ಉಪ ಉತ್ಪನ್ನಗಳ ಬಳಕೆಗೆ ಪ್ರೋತ್ಸಾಹಿಸುವುದು.
 • ಎಥನಾಲ್‌ ಉತ್ಪಾದನೆ ಮತ್ತು ಬಳಕೆಯನ್ನು ಹೆಚ್ಚಿಸುವುದು.
 • ಜೈವಿಕ ಇಂಧನ ಸಸ್ಯಗಳನ್ನು ಬೆಳೆಸಲು ಸಮುದಾಯದ ಸಹಭಾಗಿತ್ವದಲ್ಲಿ ಕಾರ್ಯಕ್ರಮಗಳನ್ನು ರೂಪಿಸುವುದು.
 • ರೈತರಿಗಾಗಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದು
 • ಮೌಲ್ಯವರ್ಧನೆಗಾಗಿ ಬೀಜ ಸಂಗ್ರಹಣಾ ಜಾಲ ನಿರ್ಮಿಸುವುದು ಹಾಗೂ ಜೈವಿಕ ಇಂಧನ ಉತ್ಪಾದನಾ ಘಟಕಗಳನ್ನು ಸ್ಥಾಪಿಸುವುದು.
 • ವಿಶ್ವವಿದ್ಯಾಲಯ ಹಾಗೂ ಸಂಶೋಧನಾ ಸಂಸ್ಥೆಗಳನ್ನು ಜೈವಿಕ ಇಂಧನ ಕ್ಷೇತ್ರದ ಸಂಶೋಧನೆಯಲ್ಲಿ ತೊಡಗಿಸುವುದು.

 

ದೃಷ್ಠಿ ಕೋನ

ಕಚ್ಚಾ ತೈಲ ಮತ್ತು ನೈಸರ್ಗಿಕ ಅನಿಲದ ಮೇಲಿನ ಭಾರತದ ಆಮದು ಅವಲಂಬನೆಯನ್ನು ತಗ್ಗಿಸುವುದರೊಂದಿಗೆ ಏಕಕಾಲದಲ್ಲಿ ಇಂಧನ ಭದ್ರತೆ, ಗ್ರಾಮೀಣ ಆದಾಯ ಹೆಚ್ಚಳ ಹಾಗೂ ಸಮುದಾಯ ಭಾಗವಹಿಸುವಿಕೆಯನ್ನು ಹೆಚ್ಚಿಸಿ, ಜೈವಿಕ ಇಂಧನ ಉತ್ಪಾದನೆಯನ್ನು ಮುಖ್ಯವಾಹಿನಿಗೆ ತರುವುದಾಗಿದೆ.

 

ಜೀವಿತೋದ್ದೇಶ

“ಜೈವಿಕ ಇಂಧನ ಅಭಿವೃದ್ಧಿಯಲ್ಲಿ ಅಖಾದ್ಯ ತೈಲ ಪ್ರಭೇಧಗಳು, ವಿವಿಧ ತಳಿಗಳನ್ನು ಗುರುತಿಸಿ, ಸಮುದಾಯ ಸಹಭಾಗಿತ್ವ, ವಿಕೇಂದ್ರೀಕರಣ ವ್ಯವಸ್ಥೆಯನ್ನು ಅನುಸರಿಸಿ ಕಾರ್ಯಕ್ಷಮತೆ ಹಾಗೂ ಪರಿಣಾಮಕಾರಿ ಯೋಜನಾ ಅನುಷ್ಟಾನದ ಮೂಲಕ ಪ್ರಗತಿ ಸಾಧಿಸುವುದು”.

 

ಮಂಡಳಿಯ ಸರ್ವ ಸದಸ್ಯ ಸಮಿತಿ ರಚನೆ

ಕರ್ನಾಟಕ ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿಯು ಕರ್ನಾಟಕ ಸಂಘಗಳ ನೋಂದಣಿ ಕಾಯ್ದೆ 1960 ರಡಿ ನೋಂದಾಯಿತವಾಗಿರುತ್ತದೆ (ನೋಂದಣಿ ಸಂಖ್ಯೆ: SOR/BLU/DR/597/10-11 ದಿನಾಂಕ 20-09-2010). ನೋಂದಾಯಿತ ಸಂಸ್ಥೆಯಾಗಿದೆ. ಸರ್ವ ಸದಸ್ಯ ಸಮಿತಿಯಲ್ಲಿ ಮಾನ್ಯ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ ರಾಜ್‌ ಸಚಿವರ ಅಧ್ಯಕ್ಷತೆಯಲ್ಲಿ, ರಾಜ್ಯ ಯೋಜನಾ ಮಂಡಳಿಯ ಮಾನ್ಯ ಅಧ್ಯಕ್ಷರನ್ನು ಉಪಾಧ್ಯಕ್ಷರನ್ನಾಗಿ, 8 ಜನ ಮಾನ್ಯ ಸಚಿವರು (ಕೃಷಿ, ಅರಣ್ಯ, ಸಾರಿಗೆ, ತೋಟಗಾರಿಕೆ, ಕೈಗಾರಿಕೆ, ಸಹಕಾರ, ಕಂದಾಯ ಮತ್ತು ಇಂಧನ ಇಲಾಖೆಗಳು) ಸದಸ್ಯರುಗಳಾಗಿ, 21 ಜನ ಅಧಿಕಾರಿ ಸದಸ್ಯರು, 6 ಜನ ನಾಮ ನಿರ್ದೇಶನಗೊಂಡ ಸದಸ್ಯರು ಹಾಗೂ 11 ಜನ ಕಾರ್ಯಕಾರಿ ಸಮಿತಿ ಮಾನ್ಯ ಅಧ್ಯಕ್ಷರು ಹಾಗೂ ಸದಸ್ಯರನ್ನೊಳಗೊಂಡು ಸರ್ವ ಸದಸ್ಯ ಸಮಿತಿ ರಚನೆಗೊಂಡಿರುತ್ತದೆ. ಮಂಡಳಿಯ ವ್ಯವಸ್ಥಾಪಕ ನಿರ್ದೇಶಕರು ಈ ಸಮಿತಿಯ ಸದಸ್ಯ ಕಾರ್ಯದರ್ಶಿಗಳಾಗಿರುತ್ತಾರೆ. ಈ ಸಭೆಯಲ್ಲಿ ಮಂಡಳಿಯ ವಾರ್ಷಿಕ ಚಟುವಟಿಕೆಗಳು, ಲೆಕ್ಕಪತ್ರ, ಮುಂದಿನ ಕ್ರಿಯಾ ಯೋಜನೆ ಮತ್ತು ವಿಶೇಷ ಯೋಜನೆಗಳ ಪರಿಶೀಲನೆಯಾಗುವುದು.

ಇತ್ತೀಚಿನ ನವೀಕರಣ​ : 30-07-2020 04:13 PM ಅನುಮೋದಕರು: G N Dayananda


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

 • ಹಕ್ಕುಸ್ವಾಮ್ಯ ನೀತಿ
 • ಬಾಹ್ಯಜಾಲತಾಣ ಸಂಪರ್ಕ ನೀತಿ
 • ಭದ್ರತಾ ನೀತಿ
 • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

 • ಇತ್ತೀಚಿನ ನವೀಕರಣ​ :
 • ಸಂದರ್ಶಕರು :
 • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕರ್ನಾಟಕ ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080